ಬೆಂಗಳೂರು : ರಾಜ್ಯದಲ್ಲಿ ಇದೀಗ ಆರ್.ಆರ್ ನಗರ ಶಾಸಕ ಮುನಿರತ್ನ ಬಂಧನದ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಕೇಸ್‌ನಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಆಡಿಯೋ ವೈರಲ್ ಆಗಿದೆ ಎಂದು ತಿಳಿದುಬಂದಿದೆ.
ಹೌದು ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್ ಆಗಿದೆ.ಆದರೆ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ, ಚಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪೊಲೀಸರ ತನಿಖೆ ವೇಳೆಯಲ್ಲೂ ಈ ಆಡಿಯೋ ಬಗ್ಗೆ ಪ್ರಸ್ತಾಪವಾಗಿಲ್ಲ ಎನ್ನಲಾಗುತ್ತಿದೆ.