ಹಾವೇರಿ : ಕಳೆದ ವರ್ಷ ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹ ಹಿರೇಮಠಗಳನ್ನು ಫಯಾಜ್ ಎನ್ನುವ ಹಂತಕ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ಇಡೀ ದೇಶದಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಹಾವೇರಿಯಲ್ಲಿ ಅಂತದ್ದೇ ಘಟನೆ ಮರುಕಳಿಸಿದ್ದು, ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೊಲೆಯಾದ ಯುವತಿಯನ್ನು ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ತಿಳಿಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಹತ್ಯೆ ಪ್ರಕರಣದಲ್ಲಿ ನಯಾಜ್ ಇರುವ ಅನುಮಾನ ವ್ಯಕ್ತವಾಗಿದೆ. ಮೃತ ಸ್ವಾತಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿ ನಯಜ್ ನನ್ನು ಹಲಗೇರಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ?
ಮಾರ್ಚ್ 3 ರಂದು ಸ್ವಾತಿ ರಮೇಶ್ ಬ್ಯಾಡಗಿ ಕಾಣೆಯಾಗಿದ್ದಳು. ಈ ಕುರಿತು ಸ್ವಾತಿ ಪೋಷಕರು ಮಿಸ್ಸಿಂಗ್ ದೂರು ದಾಖಲಿಸಿದ್ದರು. ಮಾರ್ಚ್ 6 ರಂದು ಸ್ವಾತಿಯ ಮೃತದೇಹ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದ ತುಂಗಭದ್ರಾ ನದಿ ಬಳಿ ಶವ ಪತ್ತೆಯಾಗಿತ್ತು. ಬಳಿಕ ಪೋಸ್ಟ್ಮಾರ್ಟಂ ರಿಪೋರ್ಟ್ ನಲ್ಲಿ ಇದು ಆಕಸ್ಮಿಕ ಸಾವಲ್ಲ ಕೊಲೆಯಾಗಿದೆ ಎಂದು ತಿಳಿದು ಬಂದಿದೆ.
ಇದೀಗ ಕುಟುಂಬಸ್ಥರು ಲವ್ ಜಿಹಾದ ನಿಂದ ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ ಎಂದು ಮೃತ ಸ್ವಾತಿ ಪೋಷಕರು ಆರೋಪಿಸುತ್ತಿದ್ದಾರೆ. ಪೋಷಕರ ಆರೋಪದ ಪ್ರಕಾರ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಮುಸ್ಲಿಂ ಯುವಕನೊಂದಿಗೆ ಪ್ರೀತಿ ಪ್ರೇಮದಲ್ಲಿ ಬಿದಿದ್ದಳು.ಈ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ನಯಾಜ್ ಎನ್ನುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಪೋಷಕರು ಇದು ಲವ್ ಜಿಹಾದಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಫತ್ತೆಪುರ ಗ್ರಾಮದ ತುಂಗಭದ್ರಾ ನದಿ ಬಳಿ ಸ್ವಾತಿಯ ಶವ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದಲ್ಲಿ ಶವ ಪತ್ತೆಯಾಗಿತ್ತು.