ಬೆಂಗಳೂರು : ದರ್ಶನ್ ಅವರ ಕುರಿತು ಹೇಳಿಕೆ ನೀಡಿದ ನಟಿ ರಮ್ಯಾ ಗೆ ಇತ್ತೀಚಿಗೆ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದರು. ಅದರ ಬೆನ್ನಲ್ಲೆ ಇದೀಗ ನಟಿ ಸೋನು ಶೆಟ್ಟಿಗೂ ಕೂಡ ದರ್ಶನ್ ಅಭಿಮಾನಿಗಳು ಅಶೀಲವಾಗಿ ಮೆಸೇಜ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಕುರಿತು ನಟಿ ಸೋನು ಶೆಟ್ಟಿ, ಗಂಭೀರವಾದ ಆರೋಪ ಮಾಡಿದ್ದಾರೆ.
ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಎಂದಿದ್ದ ಸೋನುಶೆಟ್ಟಿಗೆ ಡಿ ಬಾಸ್ ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋನುಶೆಟ್ಟಿಗೆ ಅಶ್ಲೀಲ ಪದ ಬಳಕೆ ಮಾಡಿ ಬೈದಿದ್ದಾರೆ. ಇನ್ಸ್ಟಾಗ್ರಾಂ ನಲ್ಲಿ ಸೋನು ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದರ್ಶನ್ ಅಭಿಮಾನಿಗಳು ಮಾಡಿದ ಕೆಟ್ಟ ಕಮೆಂಟ್ ಗಳನ್ನು ತೋರಿಸಿದ್ದಾರೆ. ಸೋನುಶೆಟ್ಟಿ ಮಾಡಿದ ಪೋಸ್ಟ್ ವೈರಲ್ ಆಗಿದೆ. ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಕಿಡಿಗೇಡಿಗಳ 43 ಐಪಿ ಅಡ್ರೆಸ್ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ಸಿಸಿಬಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.