ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇತ್ತೀಚಿಗೆ ಕೋರ್ಟ್ ವಜಾ ಗೊಳಿಸಿತ್ತು. ಇದರ ಬೆನ್ನಲ್ಲೇ ರನ್ಯಾರಾವ್ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಪತಿ ಜತಿನ್ ಹುಕ್ಕೇರಿ ನಟಿ ರನ್ಯಾರಾವ್ ಳಿಂದ ದೂರವಾಗಿದ್ದು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ವಿಚ್ಚೇದನ ಕೋರಿ ಪತಿ ಜತಿನ್ ಹುಕ್ಕೇರಿ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಜಾ ಬೆನ್ನಲ್ಲೇ ರನ್ಯಾಗೆ ಮತ್ತೊಂದು ಶಾಕ್ ಎದುರಾಗಿದೆ.
ರನ್ಯಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಪತಿ ಜತೀನ್ ಹುಕ್ಕೇರಿ ರನ್ಯಾಳಿಂದ ದೂರವಾಗಲು ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮದುವೆಯಾದಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ರೀತಿಯಿಂದ ತೊಂದರೆ ಅನುಭವಿಸುತ್ತಿದ್ದರು. ಹೀಗಾಗಿ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ.