ನವದೆಹಲಿ : ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ನವದೆಹಲಿಯಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿದ್ದು, ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ಪುನೀತ್ ಖುರಾನ್, ಬೇಕರಿ ಮಾಲೀಕತ್ವದ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು.
ಆತ್ಮಹತ್ಯೆಗೂ ಮುನ್ನ ಪುನೀತ್ ಖುರಾನ್ ಗೆ ಪತ್ನಿ ಕರೆ ಮಾಡಿದ್ದಳು. ತನಗೆ ಮತ್ತು ತನ್ನ ಕುಟುಂಬವನ್ನು ಅವಮಾನಿಸಿದ್ದಾನೆ ಎಂದು ಆರೋಪಿಸಿರುವ ಆಕೆ, ಮೊಬೈಲ್ ನಲ್ಲಿ ಮಾತನಾಡುವ ವೇಳೆ ತನ್ನ ಹಾಗೂ ಪುನೀತ್ ನಡುವೆ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಂಬಂಧಿಕರಿಗೆ ಕಳುಹಿಸಿದ್ದಾಳೆ. ಸದ್ಯ ಪುನೀತ್ ಖುರಾನ್ ಮೊಬೈಲ್ ವಶಪಡಿಸಿಕೊಂಡಿರುವ ಪೊಲೀಸರು ಪುನೀತ್ ಪತ್ನಿಯನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.