ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ನಾಳೆ ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು ನಾಳೆ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಅಲ್ಲದೆ ಎಲ್ಲಾ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಈ ಒಂದು ಔತಣಕೂಟ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಹಲವು ಸಚಿವರಿಗೆ ಕೊಕ್ ನೀಡಿ, ಹೊಸಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.