ಚಿಕ್ಕಬಳ್ಳಾಪುರ : ಗುತ್ತಿಗೆದಾರನ ಬಳಿ 3 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ ಒಬ್ಬರು, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಕೃಷಿ ಅಧಿಕಾರಿಯ ಶಂಕರಯ್ಯ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಕೃಷಿ ಅಧಿಕಾರಿ ಶಂಕರಯ್ಯ ಗುತ್ತಿಗೆದಾರ ಮಂಜುನಾಥ ಬಳಿ 3 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಈ ವೇಳೆ ಶಂಕರಯ್ಯ ಬ್ಯಾಗ್ ಚೆಕ್ ಮಾಡಿದಾಗ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ವೇಳೆ ಅಧಿಕಾರಿಗಳು ಹಣ ಎಣಿಸಲು ಮಿಷನ್ ತರಿಸಿಕೊಂಡಿದ್ದಾರೆ. 1 ಲಕ್ಷ ಲಂಚ ಮುಂಗಡವಾಗಿ ಶಂಕರಯ್ಯ ಪಡೆದಿದ್ದರು. ಇದು 2 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಕಚೇರಿಯ ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.