ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್ ಪೊಲೀಸ್ ಆಯುಕ್ತರು ಈ ಮಾಹಿತಿ ನೀಡಿದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ಘಟನೆ ಸಂಭವಿಸಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನ ನಿಯೋಜಿಸಲಾಯ್ತು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಏರ್ ಇಂಡಿಯಾ ವಿಮಾನ ಪತನ: ರಕ್ಷಣಾ ಕಾರ್ಯಾಚರಣೆ ಬಳಿಕ ಸಾವಿನ ನಿಖರ ಮಾಹಿತಿ- ವಿದೇಶಾಂಗ ಸಚಿವಾಲಯ
ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಕೊನೆಯ ಫೋಟೋ ವೈರಲ್