ಬೆಳಗಾವಿ : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಮತ್ತು ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಬೆಳಗಾವಿಯಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಸ್ಪರ್ಧೆಯಲ್ಲಿರುವ ಯಾವ ನಾಯಕರು ಮುಖ್ಯಮಂತ್ರಿ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರು ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಒಮ್ಮೆ ಸಿಎಂ ಆಗಬೇಕೆಂದು ಕಾಯುತ್ತಿದ್ದಾರೆ.ಒಮ್ಮೆಯಾದರೂ ಸಿಎಂ ಆಗಬೇಕೆಂದು ಅವರಿಗೆ ಆಸೆ ಇದೆ. ಅಲ್ಲಿ ಏನೂ ಕೆಲಸ ಇಲ್ಲ ಯಾವುದೇ ಉತ್ಪನ್ನವಿಲ್ಲ. ಸಿಎಂ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದರು. ಡಿಕೆ ಶಿವಕುಮಾರ್ ಸಿಎಂ ಮಾಡಿದರೆ ನಮ್ಮ ಕಡೆಯಿಂದ ಸತೀಶ ಮಾಡಬೇಕೆಂದು ಹೇಳಿಸಿದ್ರು. ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ ಸತೀಶ ಜಾರಕಿಹೊಳಿ ಹೆಸರು ಹೇಳಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದರು.








