ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್ ಪೊಲೀಸ್ ಆಯುಕ್ತರಾದ ಜ್ಞಾನೆಂದ್ರ ಸಿಂಗ್ ಮಲಿಕ್ ಈ ಮಾಹಿತಿ ನೀಡಿದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ಘಟನೆ ಸಂಭವಿಸಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನ ನಿಯೋಜಿಸಲಾಯ್ತು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
BREAKING : ಅಹಮದಾಬಾದ್ ವಿಮಾನ ದುರಂತ ; ಕನಿಷ್ಠ 120 ಜನರು ಸಾವು ಶಂಕೆ