ಅಹಮದಾಬಾದ್ : ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 265 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಅಹಮದಾಬಾದ್’ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ದೃಢಪಡಿಸಿದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ದುರಂತ ಸಂಭವಿಸಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನ ನಿಯೋಜಿಸಲಾಯ್ತು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
PM Narendra Modi will be visiting Gujarat's Ahmedabad today.#AhmedabadPlaneCrash pic.twitter.com/4fN7dla4va
— ANI (@ANI) June 13, 2025