ಅಹಮದಾಬಾದ್ : ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಧ್ಯ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ನಾಳೆ ಮುಂಜಾನೆ ಅಹಮದಾಬಾದ್’ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ದೃಢಪಡಿಸಿದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ದುರಂತ ಸಂಭವಿಸಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನ ನಿಯೋಜಿಸಲಾಯ್ತು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ
BREAKING: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ
BREAKING : ‘ವಿಮಾನ ದುರಂತದಲ್ಲಿ ಮೂವರು MBBS ವಿದ್ಯಾರ್ಥಿಗಳು ಸಾವು, 45 ಮಂದಿಗೆ ಗಾಯ’ : ‘IMA’ ಹೇಳಿಕೆ ಬಿಡುಗಡೆ