ಬೆಂಗಳೂರು : ಚಿನ್ನದಂಗಡಿ ಮಾಲಕಿ ವನಿತಾ ಐತಾಳ್ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡರನ್ನು ಬಂಧಿಸಿದ್ದಾರೆ.
ಐಶ್ವರ್ಯಾ ಗೌಡ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ವರಾಹಿ ವರ್ಲ್ಡ್ ಜ್ಯುವೆಲ್ಲರಿ ಅಂಗಡಿ ಮಾಲಕಿ ವನಿತಾ ಐತಾಳ್ ಅವರಿಗೆ 9 ಲಕ್ಷ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ವನಿತಾ ಐತಾಳ್ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಐಶ್ವರ್ಯಾ, ಆಕೆಯ ಪತಿ ಹರೀಶ್ ಗೌಡ, ನಟ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಚಂದ್ರಾ ಲೌಟ್ ಠಾಣೆ ಪೊಲೀಸರು ವಿಚಾರಣೆ ಬಳಿಕ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡ ಇಬ್ಬರನ್ನು ಬಂಧಿಸಲಾಗಿದ್ದು, ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯಲಾಗಿದೆ.