ಬೆಂಗಳೂರು : ಶಿಗ್ಗಾವಿ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಜೊತೆಗೆ ಸಂಧಾನ ಯಶಸ್ವಿಯಾಗಿದ್ದು, ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅವರೊಂದಿಗೆ ಸಂಧಾನ ಮಾಡಿದ್ದರು. ಆದರೆ ಅದು ಫಲಿಸಲಿಲ್ಲ. ಹಾಗಾಗಿ ಇದೀಗ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು, ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸದಾಶಿವನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಅಜ್ಜಂಪಿರ್ ಖಾದ್ರಿ ಹೆಸರು ಚಾಲ್ತಿಯಲ್ಲಿತ್ತು ಉಪಚುನಾವಣೆಯಲ್ಲಿ ಅಜ್ಜಂಪಿರ್ ಖಾದ್ರಿ ಹೆಸರು ಚಾಲ್ತಿಯಲ್ಲಿತ್ತು ಹಾಗಾಗಿ ಅವರ ಜೊತೆ ಸಂಧಾನ ನಡೆಯಿಸಿದ್ದು ಅಕ್ಟೋಬರ್ 30 ರಂದು ಅಜ್ಜಂಪಿರ್ ನಾಮಪತ್ರ ಹಿಂಪಡೆಯುತ್ತಾರೆ. ಶಿಗ್ಗಾವಿ ಬಡ್ಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಬಳಿಕ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ಮಾತನಾಡಿ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಂಧಾನ ಮಾಡಿದ್ದರು. ನಾಳೆ ಕಾರ್ಯಕರ್ತರ ಜೊತೆ ಬರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೇಳಿದ್ದೇನೆ. ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾತಿಗೆ ನಾನು ಬದ್ಧನಾಗಿರುತ್ತೇನೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ ಎಂದು ಅಜ್ಜಂಪೀರ್ ಖಾದ್ರಿ ತಿಳಿಸಿದ್ದಾರೆ.
ಶಿಗ್ಗಾವಿ ಕ್ಷೇತ್ರದಲ್ಲಿ ಉಪಚುನಾವಣೆಗೆ ಕಾಂಗ್ರೆಸ್ ಯಾಸಿರ್ ಪಠಾಣ್ ಅವರಿಗೆ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಂಡಾಯವೇದಿದ್ದ ಅಜ್ಜಂಪಿರ್ ಖಾದ್ರಿ ಅವರು ಕಾರ್ಯಕರ್ತರ ಒತ್ತಾಯದ ಮೇರೆಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅಲ್ಲಿಗೆ ತೆರಳಿ ಸಂಧಾನ ಮಾಡಿದ್ದರೂ ಕೂಡ ಅದು ಯಶಸ್ವಿಯಾಗಿರಲಿಲ್ಲ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಸಂಧಾನ ಯಶಸ್ವಿಯಾಗಿದ್ದು,ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.