2025-26 ನೇ ಸಾಲಿನಲ್ಲಿ ಹಸಿರು ಕ್ರಾತಿಯ ಹರಿಕಾರ ಹಾಗೂ ಭಾರತದ ಉಪಪ್ರಧಾನಿ ಡಾ. ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮಗಳನ್ನು ಸರ್ಕಾರದಿಂದ ಏಪ್ರಿಲ್ 5, 2025 ರಂದು ಆಚರಿಸಲಾಗುತ್ತಿದೆ.
ಅದರಂತೆ ಈ ವರ್ಷವೂ ಸಹ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಸದರಿ ಜಯಂತಿಯನ್ನು ಏಪ್ರಿಲ್ 5, 2025 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಾಜರಿದ್ದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಏಪ್ರಿಲ್ 5, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಪ್ರಯುಕ್ತ ಏಪ್ರಿಲ್ 5, 2025 ರಂದು ಜ್ಯುಬ್ಲಿ ವೃತ್ತದಲ್ಲಿರುವ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು, ನಂತರ ಡಾ. ಪಾಟೀಲ ಪುಟ್ಟಪ್ಪ ಸಭಾಭವನ (ಕರ್ನಾಟಕ ವಿದ್ಯಾವರ್ಧಕ ಸಂಘ) ದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.