ನವದೆಹಲಿ : ಭಾರತದ ಸ್ಪಿನ್ನರ್ ಪಿಯೂಷ್ ಚಾವ್ಲಾ ಶುಕ್ರವಾರ ಮಧ್ಯಾಹ್ನ ಎಲ್ಲಾ ರೀತಿಯ ಕ್ರಿಕೆಟ್’ನಿಂದ ನಿವೃತ್ತಿ ಘೋಷಿಸಿದ್ದಾರೆ. 36 ವರ್ಷದ ಚಾವ್ಲಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಸುದೀರ್ಘ ಹೇಳಿಕೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಸ್ಪಿನ್ನರ್ 2007 ಮತ್ತು 2011ರಲ್ಲಿ ಭಾರತದ ಟಿ 20 ಮತ್ತು ಏಕದಿನ ವಿಶ್ವಕಪ್ ವಿಜೇತ ತಂಡಗಳ ಸದಸ್ಯರಾಗಿದ್ದಾರೆ. ಚಾವ್ಲಾ ಮೂರು ಟೆಸ್ಟ್, 25 ಏಕದಿನ ಮತ್ತು ಏಳು ಟಿ 20 ಐಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, ಆಟದ ಮೂರು ಸ್ವರೂಪಗಳಲ್ಲಿ 43 ವಿಕೆಟ್ ಪಡೆದಿದ್ದಾರೆ.
ಐಪಿಎಲ್’ನಲ್ಲಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. 2014ರ ಐಪಿಎಲ್ ವಿಜೇತ ತಂಡದ ಭಾಗವಾಗಿದ್ದರು ಮತ್ತು ಬೆಂಗಳೂರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಗೌತಮ್ ಗಂಭೀರ್ ನೇತೃತ್ವದ ತಂಡಕ್ಕೆ ಗೆಲುವಿನ ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ