ಮೈಸೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇದೀಗ ಇಂದು ಮೈಸೂರಿನ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಹೌದು ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದ್ದು, ಫೆಂಗಲ್ ಚಂಡಮಾರುತದಿಂದ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ನಿನ್ನೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.