ನವದೆಹಲಿ : ಹೊಸದಿಲ್ಲಿ : ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ನಿನ್ನೆ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವ ನಿರ್ಧಾರವನ್ನು ತಿಳಿಸಿದೆ.
ಮೇ 25 ರವರೆಗೆ ಐಪಿಎಲ್ ಟೂರ್ನಿ ನಡೆಯಬೇಕಿತ್ತು. ಆದರೆ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಇದೀಗ ಬಿಸಿಸಿಐ ಐಪಿಎಲ್ ಟೂರ್ನಿಯ ಮುಂದಿನ ಎಲ್ಲಾ ಪಂದ್ಯಗಳನ್ನು ರದ್ದು ಮಾಡಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಇದೀಗ ಐಪಿಎಲ್ ಟೂರ್ನಿಯಾ ಮುಂದಿನ ಎಲ್ಲಾ ಪಂದ್ಯಗಳು ರದ್ದು ಮಾಡಿ ಬಿಸಿಸಿಐ ಪ್ರಕಟಣೆ ಹೊರಡಿಸಿದೆ.