ವಿಜಯಪುರ : ಮಹಾತ್ಮ ಗಾಂಧೀಜಿಯ ವಿರುದ್ಧ ವಿಜಯಪುರ ನಗರ ಉಚ್ಛಾಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ, ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗಾಂಧೀಜಿಯನ್ನು ಪಾಕಿಸ್ತಾನದ ಪಿತಾಮಹ ಎಂದಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೀಗ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೇ 11ರಂದು ಮಹಾತ್ಮ ಗಾಂಧೀಜಿ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಹೇಳಿಕೆ ನೀಡಿದ್ದರು. ಭಾರತ ಇಬ್ಬಾಗ ಮಾಡಿದ್ದರ ಬಗ್ಗೆ ಯತ್ನಾಳ್ ಮಾತನಾಡುವ ವೇಳೆ ಮಹಾತ್ಮಾ ಗಾಂಧೀಜಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಇದೀಗ ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.