ಮಂಡ್ಯ : ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ನಗರಸಭೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಶ್ರೀರಂಗಪಟ್ಟಣದ ನಿವಾಸದ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಹಿಂದೆ ಮಂಡ್ಯದ ಶ್ರೀರಂಗಪಟ್ಟಣದ ತಹಶಿಲ್ದಾರ್ ಆಗಿದ್ದ ನಾಗೇಶ್.
ತಹಶಿಲ್ದಾರ್ ಆಗಿದ್ದಾಗ ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ಇದೀಗ ಲೋಕಾಯುಕ್ತ ಅಧಿಕಾರಿಗಳು ನಾಗೇಶ್ ಅಪಾರ್ಟ್ಮೆಂಟ್ ಪಕ್ಕದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.