ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್ ಗೆ ಸಂಬಂಧಪಟ್ಟಂತೆ ಇದೀಗ ಆರೋಪಿ ರಾಜೀವ್ ಗೌಡನನ್ನ ಅರೆಸ್ಟ್ ಮಾಡಿ ಶಿಡ್ಲಘಟ್ಟ JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಅದಕ್ಕೂ ಮುನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಯಿತು.
ಜಡ್ಜ್ ಸುಕನ್ಯಾ ಎದುರು ಶಿಡ್ಲಘಟ್ಟ ಪೊಲೀಸರು ರಾಜೀವ್ ಗೌಡನನ್ನ ಹಾಜರುಪಡಿಸಿದರು. ಈ ವೇಳೆ 5 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಿದರು. ರಾಜೀವ್ ಗೌಡ ಪರ ವಕೀಲ ವಿವೇಕ್ ರೆಡ್ಡಿಯಿಂದ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.








