ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಇಡಿ ವಶಕ್ಕೆ ಪಡೆದುಕೊಂಡಿದೆ. ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ.
ಹೌದು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು.
ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಇನ್ನು ನಿನ್ನೆ ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂನ ಗ್ಯಾಂಗ್‌ಟೋಕ್‌ನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಕ್ಯಾಸಿನೋವನ್ನು ಗುತ್ತಿಗೆಗೆ ನೀಡುವ ಕುರಿತ ಮಾತುಕತೆಗಾಗಿ ಗ್ಯಾಂಗ್‌ಟೋಕ್‌ಗೆ ತೆರಳಿದ್ದ ವೀರೇಂದ್ರ ಅವರನ್ನು ಬಂಧಿಸಲಾಗಿದ್ದು, ಸ್ಥಳಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಟ್ರಾನ್ಸಿಟ್ ರಿಮಾಂಡ್ ಪಡೆಯಲಾಗಿದೆ ಎಂದು ಇ.ಡಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗದು, ಚಿನ್ನಾಭರಣ, ವಾಹನಗಳು ವಶಕ್ಕೆ
ಚಿತ್ರದುರ್ಗ ಜಿಲ್ಲೆಯ 6, ಬೆಂಗಳೂರಿನ 10, ಗೋವಾದ 8, ಜೋಧ್‌ಪುರದ 3, ಮುಂಬೈನ 2, ಸಿಕ್ಕಿಂನ ಗ್ಯಾಂಗ್‌ಟೋಕ್‌ನ 1 ಹಾಗೂ ಹುಬ್ಬಳ್ಳಿಯ 1 ಸೇರಿದಂತೆ 31 ಕಡೆಗಳಲ್ಲಿ ಎರಡನೇ ದಿನವೂ ಶೋಧ ಕಾರ್ಯ ಮುಂದುವರೆಸಲಾಗಿದೆ. ಈ ಸಮಯದಲ್ಲಿ ಸುಮಾರು 1 ಕೋಟಿ ರೂ. ವಿದೇಶಿ ಕರೆನ್ಸಿ, 6 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 10 ಕೆ.ಜಿ ಬೆಳ್ಳಿಯ ವಸ್ತುಗಳು ಸೇರಿದಂತೆ 12 ಕೋಟಿ ರೂಪಾಯಿ ನಗದು ಹಾಗೂ 4 ವಾಹನಗಳನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ED, Bengaluru has conducted search operation on 22-08-2025 and 23.08.2025 at 31 locations across India including Gangtok, Chitradurga District, Bangalore City, Hubli, Jodhpur, Mumbai and Goa (including 5 casinos viz. Puppy’s Casino Gold, Ocean Rivers Casino, Puppy’s Casino Pride,… pic.twitter.com/v2tvjapkdE
— ED (@dir_ed) August 23, 2025