ಮಂಡ್ಯ : ಅಧಿಕಾರಿಗಳಿಂದ ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಚೇರಿ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಖಾತೆ ಮಾಡಿರುವ ಬಗ್ಗೆ ಲೋಕಾಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ ತಾಲೂಕು ಕಚೇರಿ, ಬೆಳಗೋಳ ಗ್ರಾಮ ಸಹಾಯಕ ಬಸವಯ್ಯ, ಆರ್.ಐ ಉಮೇಶ್ ಗೆ ಸೇರಿದ ಮೈಸೂರಿನ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗೋಳ ವ್ಯಾಪ್ತಿಯ ಸರ್ಕಾರಿ ಜಮೀನು ಅಕ್ರಮ ಖಾತೆಯ ಬಗ್ಗೆ ದೂರು ಬಂದಿತ್ತು.
ಸಾರ್ವಜನಿಕರಿಂದ ಲೋಕಾಯುಕ್ತರಿಗೆ ವ್ಯಾಪಕವಾದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಚೇರಿ ಮೇಲೆ ಇಂದು ಏಕಾಏಕಿ ದಾಳಿ ಮಾಡಿದ್ದಾರೆ.ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








