ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ವಿಚಾರ ಭಾರಿ ಸದ್ದು ಮಾಡಿತ್ತು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು. ಇದೀಗ ರಾರಾಜ್ಯ ಜ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಂಗ್ರೆಸ್ ಶಾಸಕ ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧ 500 ಎಕರೆ ಭೂಕಬಳಿಕೆ ಆರೋಪ ಕೇಳಿ ಬಂದಿದೆ.
ಹೌದು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯಲ್ಲಿರುವ ಸುಮಾರು 12 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸೇರಿ ಕೆಲ ಪ್ರಭಾವಿಗಳು ಕಬಳಿಸಿದ್ದಾರೆ ಎಂದು ಆರೋಪಿ ಬಿಜೆಪಿ ನಾಯಕ ಎನ್.ಆರ್ ರಮೇಶ್ 1,67, 751 ಪುಟಗಳ ದಾಖಲೆಗಳ ಸಮೇತ ಗುರುವಾರ ಲೋಕಾಯುಕ್ತ ಮತ್ತು ಜಾರಿ ನಿರ್ದೇಶಾನಲಯಕ್ಕೆ ದೂರು ನೀಡಿದ್ದಾರೆ.
ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ, ವಂಚನೆ, ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ, ಇವರ ಪತ್ನಿ ರಾಧಾ ಬಾಲಕೃಷ್ಣ ಮಾಜಿ ಉಪ ಮಹಾ ಪೌರ ಬಿ.ಎಸ್.ಪುಟ್ಟರಾಜು, ಇವರ ಪತ್ನಿ ಬಿ.ಎಸ್ ಮಾಲಾ, ನಿವೃತ್ತ ಜಿಲ್ಲಾಧಿಕಾರಿಗಳು, ತಹಸಿಲ್ದಾರರು ಗ್ರಾಮ ಲೆಕ್ಕಿಗರು ಹಾಗೂ ಎಫ್.ಡಿ.ಎ ನೌಕರರು ಇವಂದು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಇವರೆಲ್ಲರ ವಿರುದ್ಧ ದೂರು ಸಲ್ಲಿಸಿದ್ದಾರೆ.
ಪ್ರಸ್ತುತ ಗ್ರೇಟರ್‌ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಯಶವಂತ ಪುರ ಕ್ಷೇತ್ರದಲ್ಲಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯಲ್ಲಿರುವ ಬಹುತೇಕ ಗ್ರಾಮಗಳಲ್ಲಿ ಸುಮಾರು 1,600 ಎಕರೆ ಗಳಿಗೂ ಹೆಚ್ಚು ವಿಸ್ತೀರ್ಣದ ಸಾವಿರಾರು ಕೋಟಿ ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತು ಗಳಿವೆ. ಈ ಬಗ್ಗೆ 2006 ರಲ್ಲಿ ಎ.ಟಿ.ರಾಮಸ್ವಾಮಿ ಆಯೋಗವು ಅತ್ಯಂತ ಸ್ಪಷ್ಟವಾದ ದಾಖಲೆಗಳ ಸಹಿತ ವರದಿ ಯನ್ನು ರಾಜ್ಯ ಸರ್ಕಾರಕ್ಕೆ ನೀಡಿತ್ತು.
ಈ ಪೈಕಿ, ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯಲ್ಲಿರುವ ಹತ್ತಾರು ಗ್ರಾಮ ಗಳಲ್ಲಿರುವ 500 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರೀ ಸ್ವತ್ತುಗಳನ್ನು ಪ್ರಭಾವಿ ಭೂಗಳ್ಳರು ಯಾವುದೇ ಎಗ್ಗಿಲ್ಲದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 12,000 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರೀ ಸ್ವತ್ತುಗಳನ್ನು ಕಬಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರಿ ಸ್ವತ್ತುಗಳನ್ನು ಸಂರಕ್ಷಿಸಿ: ತಾವರೆಕೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಉಳಿದು ಕೊಂಡಿರುವ 30,000 ಕೋಟಿ ರು.ಗೂ ಅಧಿಕ ಮೌಲ್ಯದ ಸುಮಾರು1,100 ಎಕರೆಗಳಿಗೂಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಸಂರಕ್ಷಿಸಿಕೊ ಳ್ಳುವ ನಿಟ್ಟಿನಲ್ಲಿ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನೂರಾರು ಕೋಟಿಗಳಷ್ಟು ಮಾರುಕಟ್ಟೆ ಮೌಲ್ಯ ವಿರುವ ಅಮೂಲ್ಯ ಸರ್ಕಾರಿ ಸ್ವತ್ತುಗಳನ್ನು ಕಬಳಿಸಿ ರುವಸರ್ಕಾರಿ ಭೂಗಳ್ಳರ ವಿರುದ್ಧ ಹಾಗೂ ಸರ್ಕಾರಿ ಸ್ವತ್ತುಗಳ ಕಬಳಿಕೆಗೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ರೀತಿಯ ಸೂಕ್ತ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಮುಖ್ಯಮಂತ್ರಿ, ಕಂದಾಯ ಸಚಿವ, ಕಂದಾಯ ಇಲಾಖೆಯ ಪ್ರಧಾನ ಕಾರ್ಯ ದರ್ಶಿ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜೆಬಿಎ ಮುಖ್ಯ ಆಯುಕ್ತರನ್ನು ಒತ್ತಾಯಿಸಿದ್ದಾರೆ.








