ಬೆಂಗಳೂರು : ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಟ ಮಡೆನೂರು ಮನು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ತನ್ನ ವಿರುದ್ಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ 2025ರ ಮೇ 22ರಂದು ದಾಖಲಾಗಿರುವ ಎಫ್ಐಆರ್ ಮತ್ತು ನಗರದ 6ನೇ ಎಸಿಜೆಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಮನು ಹೈಕೊರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಸಂಬಂಧ ಬುಧವಾರ ಕೆಲಕಾಲ ಮನು ಮತ್ತು ಪ್ರಕರಣದ ದೂರುದಾರೆಯ ಪರ ವಕೀಲರ ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಪೀಠ ವಿಚಾರಣೆಯನ್ನು ಮುಂದೂಡಿತು.