ಕಲಬುರ್ಗಿ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಷ್ಟ್ರ ರಾಜ್ಯಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಈ ಸಂಬಂಧ ದೇಶಾದ್ಯಂತ ಬಿಜೆಪಿ ವಿರುದ್ಧ ಆರಂಭಿಸಿರುವ ಮತಗಳ್ಳತನ ಆಭಿಯಾನಕ್ಕೆ ಪ್ರಮುಖ ಸಾಕ್ಷಿಯಾಗಿ ಬಳಕೆಯಾಗಿದ್ದ ಕರ್ನಾಟಕದ ಆಳಂದ ಕ್ಷೇತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕು ಪಡೆದುಕೊಂಡಿದೆ. ಇದೀಗ ಆಳಂದ ಕ್ಷೇತ್ರದ ಬಿಜೆಪಿ ಶಾಸಕನ ಮನೆ ಮೇಲೆ ಎಸ್ಐಟಿ ದಾಳಿ ಮಾಡಿದೆ.
ಹೌದು ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮನೆಯ ಮೇಲೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್ಐಟಿ ಎಸ್ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್ ಐಟಿ ಕೈಹಾಕಿದ್ದು ತನಿಖೆ ತೀವ್ರಗೊಳಿಸಿದೆ. ಬಿಜೆಪಿಯ ಇಬ್ಬರು ನಾಯಕರ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮಲ್ಲಿಕಾರ್ಜುನ ಮಹಾಂತಗೋಳ ಮನೆ ಹಾಗೂ ಕಚೇರಿ ಮೇಲೂ ಎಸ್ಐಟಿ ದಾಳಿ ಮಾಡಿದೆ. 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ, ಅಕ್ರಂ ಎಂಬ ವ್ಯಕ್ತಿಗೆ ಡೀಲ್ ಕೊಟ್ಟಿದ್ದ ಎನ್ನುವ ಅಂಶ ತಿಳಿದುಬಂದಿದೆ. ಹೀಗಾಗಿ ಎಸ್ಐಟಿ ಮಲ್ಲಿಕಾರ್ಜುನ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.