ಹೈದ್ರಾಬಾದ್ : ಪುಷ್ಪ-2 ಸಿನಿಮಾ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಹೌದು ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಅಲ್ಲು ಅರ್ಜುನ್ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ನಟ ಅಲ್ಲು ಅರ್ಜುನ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.
ಬಳಿಕ ನಟ ಅಲ್ಲು ಅರ್ಜುನ್ ಅವರು ಹೈಕೋರ್ಟಿಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ನಟ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.