ಹೈದ್ರಾಬಾದ್ : ಪುಷ್ಪ-2 ಸಿನಿಮಾ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೊಲೀಸರು ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಿದ್ದಾರೆ.
ಹೌದು ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ವೇಳೆ ಅಲ್ಲು ಅರ್ಜುನ್ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ನಟ ಅಲ್ಲು ಅರ್ಜುನ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.
ಬಳಿಕ ನಟ ಅಲ್ಲು ಅರ್ಜುನ್ ಅವರು ಹೈಕೋರ್ಟಿಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ನಟ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.