ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ 2 ಸಿನಿಮಾ ವೀಕ್ಷಣೆ ವೇಳೆ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಜೈಲಿಂದ ಬಿಡುಗಡೆಯಾಗಿ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ರೇವತಿ ಕುಟುಂಬಕ್ಕೆ ಕ್ಷಮೆ ಕೇಳುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಹೈದ್ರಾಬಾದ್ ನ ಜುಬ್ಲಿಹಿಲ್ಸ್ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಲ್ತುಳಿತ ಪ್ರಕರಣಕ್ಕೆ ನಾನು ಕ್ಷಮೆ ಕೇಳುತ್ತೇನೆ. ನಾನು ಪ್ರಕರಣದ ಬಗ್ಗೆ ಹೆಚ್ಚಿಗೆ ಏನು ಮಾತನಾಡಲ್ಲ. ಈ ಒಂದು ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಹಾಗಾಗಿ ರೇವತಿ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ.
20 ವರ್ಷಗಳಿಂದ ನಾನು ಆ ಥಿಯೇಟರಿಗೆ ಹೋಗುತ್ತಿದ್ದೇನೆ. ಅಲ್ಲದೆ 30ಕ್ಕೂ ಹೆಚ್ಚು ಬಾರಿ ಅಲ್ಲಿಗೆ ನಾನು ಭೇಟಿ ಮಾಡಿದ್ದೇನೆ. ಆದರೆ ಇಂತಹ ಘಟನೆ ಯಾವತ್ತೂ ನಡೆದಿರಲಿಲ್ಲ. ನಾನು ಚಿತ್ರ ನೋಡಲು ಬಂದಾಗ ಆಕಸ್ಮಿಕವಾಗಿ ಈ ಘಟನೆ ನಡೆದಿದೆ ರೇವತಿ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅಭಿಮಾನಿಗಳು ಸೇರಿದಂತೆ ಎಲ್ಲರಿಗೂ ಕೂಡ ಧನ್ಯವಾದ ಸಲ್ಲಿಸುತ್ತೇನೆ. ಹೈದರಾಬಾದ್ ನ ಜುಬ್ಲಿ ಹಿಲ್ಸ್ ನಿವಾಸದಲ್ಲಿ ಅಲ್ಲು ಅರ್ಜುನ್ ಹೇಳಿಕೆ ನೀಡಿದರು.








