ಮಂಗಳೂರು : ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರು ಗ್ರಾಮದಲ್ಲಿ ಖಾಸಗಿ ಕಂಪನಿ ಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿ ಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲು ಮುಂದಾಗಿದೆ. ಈ ಆ್ಯಂಬುಲೆನ್ಸ್ ಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ.
ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಅಗತ್ಯ ಇರುವವರು ಮೊಬೈಲ್ ಆ್ಯಪ್ ಬಳಸಿ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿನ ವೈದ್ಯಕೀಯ ಆ್ಯಂಬು ಲೆನ್ಸ್ ಸೇವೆಯನ್ನು ಇನ್ನು ಮುಂದೆ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆ (ಕೆಪಿಎಂಇ) ಕಾನೂನಿನ ಅಡಿ ಯಲ್ಲಿ ತರಲು ನಿರ್ಧರಿಸಿದ್ದು, ಈ ಕುರಿತಂತೆ ಬರುವವಿಧಾನಸಭೆಯ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಬುಧವಾರಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯದಲ್ಲಿಪ್ರಸ್ತುತ ಇರುವ ಆ್ಯಂಬುಲೆನ್ಸ್ ಒದಗಿಸುತ್ತಿರುವ ಸೇವೆಗಳು ಮತ್ತು ಗುಣಮಟ್ಟದ ಬಗ್ಗೆ ಹಲವು ದೂರುಗಳು ಬರುತ್ತಿದ್ದು, ಈ ಕುರಿತಂತೆ ಆ್ಯಂಬುಲೆನ್ಸ್‌ಗಳು ಯಾವ ರೀತಿ ಇರ ಬೇಕು, ಅದರಲ್ಲಿ ಯಾವ ಅಗತ್ಯ ವ್ಯವಸ್ಥೆಗಳು ಇರ ಬೇಕು ಎಂಬ ಬಗ್ಗೆ ಹಾಗೂ ಅವುಗಳಿಗೆ ದರ ನಿಗದಿ ಪಡಿಸುವ ಬಗ್ಗೆ ಕಾನೂನು ರಚಿಸಲಾಗುತ್ತಿದೆ.
ಇನ್ನು ಮುಂದೆ ಆ್ಯಂಬುಲೆನ್ಸ್ ಸೇವೆ ಒದಗಿಸುವವರು ಮತ್ತು ಮೊಬೈಲ್ ಹೆಲ್ತ್ ಯೂನಿಟ್‌ಗಳು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು. ಕೆಪಿಎಇ ಅಡಿಯಲ್ಲಿ ನೋಂದಣಿಯಾಗುವ ಆ್ಯಂಬುಲೆನ್ಸ್‌ಗಳಿಗೆ ಅವುಗಳು ಒದಗಿಸುವ ಸೇವೆ ಆಧಾರದಲ್ಲಿದರ ನಿಗದಿಪಡಿಸಲಾಗುವುದು. ಆ್ಯಂ ಬುಲೆನ್ಸ್ ಸೇವೆಯ ಅಗತ್ಯವಿರುವವರು ಆ್ಯಪ್ ಮೂಲಕ ಬುಕಿಂಗ್ ಮಾಡುವ ಸೌಲಭ್ಯ ಒದಗಿಸ ಲಾಗುವುದು ಎಂದು ತಿಳಿಸಿದರು.