ಹುಬ್ಬಳ್ಳಿ : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತಂತೆ ಕೇಂದ್ರ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಹಾಗೂ ಬೀದರ್ನಲ್ಲಿ ದಲಿತ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಇನ್ನು ಹುಬ್ಬಳ್ಳಿಯಲ್ಲಿ ಈ ಒಂದು ಬಂದ್ ತೀವ್ರ ಸ್ವರೂಪ ಪಡೆದಿದ್ದು, ಟೈರ್ ಗೆ ಬೆಂಕಿ ಹಚ್ಚಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಲಾಯಿತು.
ಬಂದ್ ಪರಿಣಾಮದಿಂದ ನಗರದ ಹಲವು ಖಾಸಗಿ ವಾಹನಗಳು ಹಾಗೂ ಬಸ್ ಗಳ ಚಕ್ರದ ಗಾಳಿ ತೆಗೆದು ಹತ್ತಿ ಬಟನಾಕಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಅಂಗಡಿ ಮುಗ್ಗಟ್ಟುಗಳನ್ನು ಕೂಡ ಬಂದ್ ಮಾಡಿಸಿದರು.
ಬೆಳಿಗ್ಗೆ 6 ಗಂಟೆಯಿಂದಲೇ ದಲಿತ ಸಂಘಟನೆಗಳು ಸೇರಿದಂತೆ ಇತರೆ ಸಂಘಟನೆಗಳು ಹುಬ್ಬಳ್ಳಿಯ ಪ್ರಮುಖ ಕೇಂದ್ರವಾದ ಚನ್ನಮ್ಮ ಸರ್ಕಲ್ ಹಾಗೂ ಸುತ್ತಮುತ್ತಲಿನ ಎಲ್ಲಾ ವ್ಯಾಪಾರ ವಹಿವಾಟು ನಡೆಸುವ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದರು. ಇನ್ನು ಒಳ ರಸ್ತೆಯಲ್ಲಿರುವ ಹಲವು ಅಂಗಡಿಗಳು ಓಪನ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ ಮತ್ತು ಧಾರವಾಡ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.