ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಹೌದು, ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಗುವಿಗೆ ಹೃದಯಸಂಬಂಧಿ ಕಾಯಿಲೆ ಬಗ್ಗೆ ಚಿಕಿತ್ಸೆಗೆ ಹೋಗಿದ್ದ ವೇಳೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ವೇಳೆ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.