ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ ಕ್ಯೂಟ್ ನಿಂದ ಎಲೆಕ್ಟ್ರಾನಿಕ್ ಅಂಗಡಿ ಒಂದು ಹೊತ್ತಿ ಉರಿದಿರುವ ಘಟನೆ ಆರ್ ಟಿ ನಗರದ ದಿನ್ನೂರು ಬಳಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ಇಂದ ಎಲೆಕ್ಟ್ರಾನಿಕ್ ವಸ್ತುಗಳಿದ್ದ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಇಂದ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಅಂಗಡಿಯಲ್ಲಿ ಯಾರು ಇಲ್ಲವಾದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ಮೌಲ್ಯದ ವಸ್ತುಗಳು ಮಾತ್ರ ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿತು.