ಧರ್ಮಸ್ಥಳ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ, ಜೆಡಿಎಸ್ ನಿಂದ ಧರ್ಮಸ್ಥಳ ಚಲೋ ಬೆನ್ನಲ್ಲೇ ಇದೀಗ ಧರ್ಮಸ್ಥಳದ ಪರ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಿಂತಿದ್ದಾರೆ.
ಹೌದು, ಆಂಧ್ರ ಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ 5 ಗಂಟೆ ಪವನ್ ಕಲ್ಯಾಣ್ ನೇತೃತ್ವದಲ್ಲಿ ಅಪಪ್ರಚಾರದ ವಿರುದ್ಧ ಪೂಜೆ ಸಲ್ಲಿಸಲಿದ್ದಾರೆ.