ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.
ಎಸ್.ಎಂ.ಕೃಷ್ಣ ನಿಧನಕ್ಕೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ನಮ್ಮ ಸ್ನೇಹವು ನಮ್ಮ ಆಯಾ ರಾಜ್ಯಗಳಿಗೆ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ನಾವು ಹಂಚಿಕೊಂಡ ಸ್ಪರ್ಧಾತ್ಮಕ ಮನೋಭಾವವನ್ನು ಮೀರಿದೆ. ಅವರು ಯಾವಾಗಲೂ ತಮ್ಮ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿದ ನಿಜವಾದ ನಾಯಕರಾಗಿದ್ದರು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ತಿಳಿಸಿದ್ದಾರೆ.
I'm deeply saddened to hear about the passing of former Karnataka Chief Minister, Sri SM Krishna Garu. Our friendship transcended the competitive spirit we shared in attracting investments to our respective states. He was a true leader who always prioritized the welfare of his… pic.twitter.com/JjtAw4g2ug
— N Chandrababu Naidu (@ncbn) December 10, 2024
ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.