ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಪವನ್ ಕಲ್ಯಾಣ್ ಅವರಿಗೆ ವೈರಲ್ ಜ್ವರ ತಗುಲಿದೆ. ಕಳೆದ ಎರಡು ದಿನಗಳಿಂದ ವೈರಲ್ ಜ್ವರದಿಂದ ಬಳಲುತ್ತಿದ್ದಾರೆ. ಸೋಮವಾರ ರಾತ್ರಿಯಿಂದ ಜ್ವರದ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಚಿಕಿತ್ಸೆ ನೀಡಿದ ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.








