ಚೆನ್ನೈ : 2024 ರ ಡಿಸೆಂಬರ್ನಲ್ಲಿ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ಅತಿಕ್ರಮ ಪ್ರವೇಶ ಮಾಡಿದ ನಂತರ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಜ್ಞಾನಶೇಖರನ್‌ಗೆ 30 ವರ್ಷ ಜೈಲು, 90,000 ರೂ. ದಂಡ ವಿಧಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್ 23 ರಂದು ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರಿನ ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ, ಏಕಾಂತ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಆತ ಘಟನೆಯ ವಿಡಿಯೋ ಚಿತ್ರೀಕರಿಸಿ ಇಬ್ಬರನ್ನೂ ಬ್ಲ್ಯಾಕ್ಮೇಲ್ ಮಾಡಿದ್ದ ಎನ್ನಲಾಗಿದೆ. ನಂತರ ಆತನನ್ನು ಗ್ರೇಟರ್ ಚೆನ್ನೈ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.