ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಕಳೆದ ಕೆಲ ದಿನಗಳಿಂದ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಇಂದು ಬೆಳಗ್ಗೆ 7.49 ರ ಸುಮಾರಿಗೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂ ಕಂಪನವಾಗಿದೆ.
ವಿಜಯಪುರ ನಗರ, ತೊರವಿ, ಶಿವಗಿರಿ, ತಿಕೋಟ, ಕಳ್ಳಕವಟಗಿ, ಹೊನ್ನೂಟಗಿ, ವಿಜಯಪುರ, ತಿಕೋಟ ತಾಲೂಕುಗಳಲ್ಲಿ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
		







