ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮದ್ಯದ ಅಮಲಿನಲ್ಲಿ ಚಾಲಕ ಕಂಪೌಂಡ್ ಗೆ ಗುದ್ದಿರುವ ಘಟನೆ ಬೆಂಗಳೂರಿನ ಬಸವನಗುಡಿಯ ವಾಸವಿ ಶಾಲೆಯ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಂಪೌಂಡಿಗೆ ಕಾರು ಗುದ್ದಿದೆ. 2 ಬೈಕ್ ಹಾಗೂ ಮತ್ತೊಂದು ಕಾರಿಗೂ ಹಾನಿಯಾಗಿದೆ. ಛತ್ತೀಸ್ಗಡ ನೊಂದಣಿಯ ಬೆಂಜ್ ಕಾರು ಅಪಘಾತಕ್ಕೆ ಈಡಾಗಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿದ್ದ ಬೆಂಗಳೂರು ನೇತಾಜಿ ನಗರದ ನಿವಾಸಿ ಪ್ರಣಯ್ ಜೈನ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಬಸವನಗುಡಿಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








