ಬೆಂಗಳೂರು : ಭ್ರಷ್ಟ ಅಧಿಕಾರಿಗಳನ್ನು ಬಲೆ ಹಾಕುವಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ಕಚೇರಿ ಮೇಲೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಯದುಕೃಷ್ಣ ಹೆಸರಿನ ಅಧಿಕಾರಿಯೊಬ್ಬರನ್ನು ಲಂಚದ ದುಡ್ಡು ಸಮೇತ ಬಲೆಗೆ ಕೆಡವಿದ್ದಾರೆ.
ಹೌದು ಕಾಮಗಾರಿ ಟೆಂಡರ್ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನೀಯರ್ ಆಗಿ ಯದುಕೃಷ್ಣ ಕೆಲಸ ಮಾಡುತ್ತಿದ್ದರು. ಈ ವೇಳೆ ಕಚೇರಿಯ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರಿಗೆ ಸೇರಿದಂತಹ ಕಾರಿನಿಂದ ದಾಖಲೆ ಇಲ್ಲದ ಸುಮಾರು 2.6 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೆ ವೇಳೆ ಯದುಕೃಷ್ಣ ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.