ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುಗುಗಳನ್ನು ಪಡೆಯುತ್ತಿದ್ದು, ಇದೀಗ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್‌ಐಆರ್ ದಾಖಲಾದ ಬೆನ್ನಲ್ಲಿಯೇ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ವಿರುದ್ಧ ಆರೋಪಿಸಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಇದೀಗ ನಾಪತ್ತೆಯಾಗಿದ್ದಾರೆ ಎಂದು ಕೇಳಿಬರುತ್ತಿದೆ.

ಕಳೆದ ಹಲವು ದಿನಗಳಿಂದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಬಾರಿ ಸದ್ದು ಮಾಡುತ್ತಿದೆ.ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ನಾಲ್ಕು ಎಫ್‌ಐಆರ್ ದಾಖಲಾಗಿದ್ದರೂ, ಯಾರ ಕೈಗೂ ಸಿಗದೇ ವಿದೇಶದಲ್ಲಿ ಉಳಿದುಕೊಂಡಿದ್ದಾನೆ.ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತಂತೆ ಪೆನ್ ಡ್ರೈವ್ ಹಂಚಿಕೆಯನ್ನು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಂಚಿಕೆ ಮಾಡಿದ್ದರು ಎಂದು ಹೇಳಲಾಗುತ್ತಿತ್ತು.

ಆದರೆ ಇತ್ತೀಚಿಗೆ ಅವರು ಸುದ್ದಿಗೋಷ್ಠಿಯಲ್ಲಿ ಪೆನ್ ಡ್ರೈವ್ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ನಿನ್ನೆ ಸಂತ್ರಸ್ತೇಯೊಬ್ಬರು ವಕೀಲ ದೇವರಾಜ ಗೌಡ ವಿರುದ್ಧವೇ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದೂ, ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ದಾಖಲಾಗುತ್ತಿದ್ದಂತೆಯೇ ಅವರೂ ಕೂಡ ನಾಪತ್ತೆಯಾಗಿದ್ದಾರೆ.

ದೇವರಾಜೇಗೌಡ ವಿರುದ್ಧ ಕೂಡ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಸ್ ಮನೋಹರವರು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.

ಮಹಿಳೆಯನ್ನ ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು, ಬಂಧಿಸಿ ರಾಜ್ಯದ ಜನತೆಗೆ ಅವರ ನೈಜ ಚಿತ್ರಣವನ್ನು ಹಾಗೂ ಹಿನ್ನಲೆಯನ್ನ ಬಹಿರಂಗಪಡಿಸಬೇಕು. ದೇವರಾಜೇ ಗೌಡರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಿಂದ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Share.
Exit mobile version