ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು. ಇದುವರೆಗೂ ಒಟ್ಟು ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.
ಹೌದು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮಗಾಲಯದಲ್ಲಿ ಕೃಷ್ಣಮೃಗ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗಿನ ಜಾವ ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ. ಮೃಗಾಲಯದಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಬೆಳಗಾವಿ ತಾಲೂಕಿನ ಭೂತರಾಮನ ಹಟ್ಟಿ ಬಳಿ ಇರುವ ಈ ಒಂದು ಮೃಗಾಲಯದಲ್ಲಿ ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ.
ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹಿಂದು ಬೆಳಿಗ್ಗೆ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ, ಗಳಲೇ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವ ಶಂಕೆ ಇದೆ ಮೃಗಾಲಯ ಪರಿಶೀಲನೆ ನಡೆದಿದ್ದು ಸಿಬ್ಬಂದಿಗಳ ನಿರ್ಲಕ್ಷ ಕಂಡು ಬಂದಿಲ್ಲ ಎಂಟು ಕೃಷ್ಣ ಮೃಗಗಳು ಮೃತಪಟ್ಟ ಬಳಿಕ ಮುಂಜಾಗ್ರತ ಕ್ರಮ ಕೈಗೊಂಡಿದ್ದೇವೆ ಎಲ್ಲಿಯಾದರು ತಪ್ಪಿಕೊಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಹೇಳಿಕೆ ನೀಡಿದರು.








