ಬೆಂಗಳೂರು : ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಡುವೆ ಮೊದಲ ದೂರುದಾರ ಪ್ರದೀಪ್ ಕುಮಾರ್, ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದು, ಅವರು ತಡೆಯಾಜ್ಞೆ ತರುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಕಾನೂನು ತಡೆಯಾಜ್ಞೆ ತರದಂತೆ ಕೇವಿಯೆಟ್ ಸಲ್ಲಿಸಲಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಮೊದಲ ದೂರುದಾರ ಪ್ರದೀಪ್ ಹೇಳಿದ್ದಾರೆ.