ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೌದು, ಇದೀಗ ದೂರುದಾರರಾದ ಟಿ.ಜೆ. ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಲಿದ್ದಾರೆ. ನಾಳೆ ಅಥವಾ ನಾಡಿದ್ದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.