ಶಿವಮೊಗ್ಗ : ಇತ್ತೀಚಿಗೆ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಸಾವನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭಾರಿ ಬಸ್ ಅನಾಹುತ ಒಂದು ತಪ್ಪಿದೆ, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 36 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಹೌದು ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.
ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹೊಸನಗರ ಹಾಗೂ ರಿಪ್ಪನ್ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು ಗ್ರಾಮವನ್ನು ದಾಟಿ 9ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್ಗೆ ಬೆಂಕಿ ತಗುಲಿದೆ. ಇದರಿಂದ ಗಾಬರಿಯಾದ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ.
ಬಸ್ ಪ್ರಯಾಣ ಆರಂಭಿಸಿ ಕೇವಲ 30 ನಿಮಿಷವಾಗಿದೆ. ಅಲ್ಲದೆ ಪ್ರಯಾಣಿಕರು ಇನ್ನೂ ನಿದ್ದೆ ಮಾಡದ ಕಾರಣ ಬಸ್ಗೆ ಬೆಂಕಿ ಬೀಳುತ್ತಿದ್ದಂತೆ ಬಸ್ನಿಂದ ಎಲ್ಲರೂ ಇಳಿದು ಬಚಾವ್ ಆಗಿದ್ದಾರೆ. ಒಂದು ವೇಳೆ ಬಸ್ ಮರಕ್ಕೆ ಡಿಕ್ಕಿ ಹೊಡೆಯದೆ ಮುಂದಕ್ಕೆ ಸಾಗಿದ್ದರೆ ಸಾಕಷ್ಟು ಅನಾಹುತ ಸಂಭಿಸುವ ಸಾಧ್ಯತೆ ಇತ್ತು. ಈ ಕುರಿತು ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಮಾತನಾಡಿ, ಬಸ್ಗೆ ಹೇಗೆ ಬೆಂಕಿ ತಗುಲಿದೆ ಎಂಬುದು ಸ್ಪಷ್ಟವಾಗಿಲ್ಲ. ಅದರಲ್ಲಿದ್ದ ಪ್ರಯಾಣಿಕರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.








