ಕಾರವಾರ : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏಳು ಸಾವಿರದ ಗಡಿ ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.