ಬಳ್ಳಾರಿ : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಯ ಆರ್ಭಟ ಜೋರಾಗಿದ್ದು, ಡೆಂಗ್ಯೂ ಜ್ವರಕ್ಕೆ ೧೯ ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಘಟನೆ ನಡೆದಿದೆ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ೧೯ ವರ್ಷದ ಯುವತಿಯನ್ನು ಬಳ್ಳಾರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಿ ರೇಖಾಗೆ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.