ಚಿತ್ರದುರ್ಗ : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಹೃದಯಘಾತ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಈಗ ಚಿತ್ರದುರ್ಗದಲ್ಲಿ 26 ವರ್ಷದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಹೊರವಲಯದ ಪಿಳ್ಳೆಕೆರೇನಹಳ್ಳಿ ನಿವಾಸಿ ಶಿವಕುಮಾರ್ (26) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.ಮೃತರು ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.