ಯಾದಗಿರಿ : ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಗೋಡೆ ಕುಸಿದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಿಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಭಾರೀ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದ ಪರಿಣಾಮ ಗ್ರಾಮದ ಸಕೀನಾಬಿ ನದಾಫ್ (70) ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕಲಬುರಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.