ಕಲಬುರಗಿ : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾದಲ್ಲಿ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ವ್ಯಕ್ತಿ.
ರಾಜೇಂದ್ರ ಪಾಟೀಲ್ ಮಗಳ ಮನೆಗೆ ಬಂದಿದ್ದರು. ಮಗಳ ಮನೆಯಲ್ಲಿ ಮಲಗಿದ್ದ ವೇಳೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕುರುಕುಂಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.